ನೀಟ್ ಫಲಿತಾಂಶ 2023: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ರಾಷ್ಟ್ರ ಮಟ್ಟದಲ್ಲಿ ನಡೆಯುವ ನೀಟ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಕುಂದಾಪುರ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಮರ್ ಪುರಾಣಿಕ್ 544/720, ಐಶ್ವರ್ಯ ಖಾರ್ವಿ 482/720, ತನಿಷಾ 459/720 ಅಂಕಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.