ಹುಬ್ಬಳ್ಳಿ ಕಾಲೇಜಿನ ಆವರಣದಲ್ಲಿ ಕಾರ್ಪೋರೇಟರ್ ಪುತ್ರಿ ಕೊಲೆ ಪ್ರಕರಣ: ತಾರಕಕ್ಕೇರಿದ ಪ್ರತಿಭಟನೆ; ಆರೋಪಿ ಗಲ್ಲು ಶಿಕ್ಷೆಗೆ ಎಬಿವಿಪಿ ಒತ್ತಾಯ

ಮುನವಳ್ಳಿ (ಬೆಳಗಾವಿ ಜಿಲ್ಲೆ): ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಬಿಜೆಪಿ, ಕಾಂಗ್ರೆಸ್‌ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಾಜ್ಯ ಹೆದ್ದಾರಿ ಸಂಚಾರ ಬಂದ್‌ ಮಾಡಿದರು. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸಹಪಾಠಿ ಫಯಾಜ್‌ (27) ಕಾಲೇಜು ಆವರಣದಲ್ಲೇ ಚಾಕು ಇರಿದು ಕೊಲೆ ಮಾಡಿದ್ದ. ಫಯಾಜ್‌ ಮುನವಳ್ಳಿ ಗ್ರಾಮದವನಾದ್ದರಿಂದ ಗ್ರಾಮದ ಜನ ಘಟನೆಯನ್ನು ತೀವ್ರವಾಗಿ ಖಂಡಿಸಿದರು. […]