ಯುವಜನತೆ ತಾವು ಬೆಳೆಯುವ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು: ಶೋಭಾ ಕರಂದ್ಲಾಜೆ

ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು ಭೀಕ್ಷುಕರ ದೇಶ, ಬಡವರ ದೇಶ, ಹಾವಾಡಿಗಾರ ದೇಶವೆಂದು ವಿದೇಶಿಗರು ಕರೆಯುತ್ತಿದ್ದರು. ವಿದೇಶಗಳಲ್ಲಿ […]

ಜೂನ್ 8 ರಂದು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ

ಉಡುಪಿ: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಜೂನ್ 8 ರಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರಿಗೆ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸುವ ಅಭ್ಯರ್ಥಿಗಳು https://docs.google.com/spreadsheets/d/1NfFMQa4LRvzWQWprDO2qhqQ- HlkBrjA7jSGQHZooCxo/edit?usp=sharing ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, […]

ಯುವ ಸಂವಾದ-ಭಾರತ @2047: ಸುಮುದಾಯ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಮೇ 31 ರವರೆಗೆ ಯುವ ಸಂವಾದ- ಭಾರತ @2047 ಕಾರ್ಯಕ್ರಮ ಆಯೋಜಿಸಲು, ಸಮುದಾಯ ಆಧಾರಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಕಾರ್ಯ ಜನರ ಮನಸ್ಸಿನಲ್ಲಿ ಉಳಿಯುತ್ತದೆ: ಎಂ.ಎನ್. ನಟರಾಜ್

ಉಡುಪಿ: ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕರ್ತವ್ಯದಲ್ಲಿ ತೊಡಗಿಕೊಳ್ಳುವವರಿಗೆ ಜನರ ಮನಸ್ಸಿನಲ್ಲಿಯೂ ದೊಡ್ಡ ಸ್ಥಾನ ದೊರೆಯುತ್ತದಲ್ಲದೆ, ಗೌರವ ಸನ್ಮಾನಗಳು ಅರಸಿ ಬರುತ್ತವೆ ಎಂದು ನೆಹರು ಯುವ ಕೇಂದ್ರದ ಪ್ರಾಂತೀಯ ಹಾಗೂ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜ್ ಹೇಳಿದರು. ಅವರು ಉಡುಪಿ ಜಿಲ್ಲೆಯ ವಿವಿಧ ಯುವಕ ಹಾಗೂ ಯುವತಿ ಮಂಡಲಗಳ ನೇತೃತ್ವದಲ್ಲಿ ಇಲ್ಲಿನ ಕ್ರಿಸ್ಟ್ ಸ್ಕೂಲ್ ಆವರಣದಲ್ಲಿ ಆಯೋಜಿಸಲಾದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್‌ಫ್ರೆಡ್ ಡಿಸೋಜಾ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ವಿಲ್‌ಫ್ರೆಡ್ ಡಿಸೋಜಾ ಅವರನ್ನು ಸನ್ಮಾನಿಸಿ ಮಾತನಾಡಿ ನೆಹರು ಯುವ […]

ಅಬ್ಬನಡ್ಕ ಶ್ರೀದುರ್ಗಾಪರಮೇಶ್ವರಿ ಯುವಕ ಮಂಡಲಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿ

ಉಡುಪಿ: ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ನೀಡುವ 2021-22 ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಕಾರ್ಕಳ ತಾಲೂಕು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ(ರಿ) ಆಯ್ಕೆಯಾಗಿದ್ದು, ಪ್ರಶಸ್ತಿಯು 75 ಸಾವಿರ ರೂ. ನಗದು ಹಾಗೂ ಪ್ರಶಂಸಾ ಪತ್ರವನ್ನು ಒಳಗೊಂಡಿದ್ದು, ರಾಷ್ಟ್ರಮಟ್ಟದಲ್ಲಿ ಉಡುಪಿ ಜಿಲ್ಲೆಯು ರಾಜ್ಯವನ್ನು ಪ್ರತಿನಿಧಿಸಲಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿ ಸೋಜಾ ಪ್ರಕಟಣೆಯಲ್ಲಿ […]