ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸ್ವಯಂಸೇವಕರ ನೇಮಕಾತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18-29 ವರ್ಷ ವಯೋಮಿತಿ ಒಳಗಿರಬೇಕು ಹಾಗೂ ಯಾವುದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.nyks.nic.in ಅಥವಾ ಜಿಲ್ಲಾ ಯುವಜನ ಅಧಿಕಾರಿಗಳು, ನೆಹರು ಯುವ ಕೇಂದ್ರ, […]

ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನ ಸಂಪನ್ನ

ಉಡುಪಿ: ಶುಕ್ರವಾರ ಉಡುಪಿ ಚರ್ಚಿನಲ್ಲಿ, ನೆಹರೂ ಯುವಕೇಂದ್ರ ಸಂಘಟನೆ ಉಡುಪಿ ಜಿಲ್ಲೆ, ಯುವ ವಿದ್ಯಾರ್ಥಿ ಸಂಚಲನ, ಉಡುಪಿ ಧರ್ಮಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಮಾಜದಲ್ಲಿ ಬದುಕುವ ಪ್ರತಿಯೋರ್ವನೂ ಮೊದಲು ಮಾನವನಾಗುವತ್ತ ಕಾರ್ಯಪ್ರವೃತ್ತನಾದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮನುಷ್ಯ ಸದಾ ಕ್ರಿಯಾಶೀಲನಾಗಿರಲು ಬಯಸುತ್ತಾನೆ. ಯಾವುದಾದರೂ ಚಟುವಟಿಕೆಯಲ್ಲಿ ತನ್ನನ್ನೇ ತಾನು ತೊಡಗಿಸಿಕೊಳ್ಳುತ್ತಾನೆ. ಇದು ಮನುಷ್ಯರಲ್ಲಿ ಅಂತರ್ಗತವಾಗಿರುವ ಗುಣ. ವಿದ್ಯಾರ್ಥಿಗಳು ತಮ್ಮ […]

ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನ

ಉಡುಪಿ: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ […]

ಕಡಲ ಸ್ವಚ್ಛತಾ ಅಭಿಯಾನ: ಬೆಂಗಳೂರಿನಿಂದ ಕೆಮ್ಮಣ್ಣಿಗೆ ಬೈಕ್ ಮೂಲಕ ಆಗಮಿಸಿ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ ಗಳು

ಕೆಮ್ಮಣ್ಣು: ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಯ ಮೂಲಕ ಬೆಂಗಳೂರಿನ ಸ್ವಾತಿ ಆರ್ ಮತ್ತು ಅನಿತಾ ಎಂ ಮಂಗಳವಾರ ಹೂಡೆ ಕಡಲ ತೀರದಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್, ತೋನ್ಸೆ ಗ್ರಾಮ ಪಂಚಾಯತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.), ನಿರ್ಮಲ್ ತೋನ್ಸೆ, ಲಯನ್ಸ್ ಕ್ಲಬ್ […]