ಪೊಲೀಸ್ ಇಲಾಖೆ ನೇಮಕಾತಿ- ಮಾಹಿತಿ ಕಾರ್ಯಾಗಾರ
ಉಡುಪಿ, ಜೂನ್ 26: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 9.30ಕ್ಕೆ ಮಲ್ಪೆ ಏಳೂರು ಮೊಗವೀರ ಸಭಾಭವನದ ಮತ್ಸ್ಯನಿಧಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿರುವ ಕರಾವಳಿ ತೀರದ ಮೀನುಗಾರ ಯುವಕ ಹಾಗೂ ಯುವತಿಯರಿಗೆ ಪೊಲೀಸ್ ಇಲಾಖೆಗೆ ನೇಮಕಾತಿ ಕುರಿತು, ಕರ್ನಾಟಕ ಕೆ.ಎಸ್.ಆರ್.ಪಿ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ ರಾವ್ ಮಾಹಿತಿ ಕಾರ್ಯಾಗಾರ ನಡೆಸಲಿದ್ದಾರೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.