ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹೆಫ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಉಡುಪಿಯಿಂದ ವರ್ಗಾವಣೆ ಮಾಡಲಾಗಿದ್ದು, ಯಾವ ಹುದ್ದೆಗೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಜಗದೀಶ್ ಅವರು ಕೋಲಾರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.