ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಂದ ಅಧಿಕಾರ ಸ್ವೀಕರಿಸಿದರು. ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾದ ಇವರು ಮಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದು, ಮಂಗಳೂರು ವಿವಿಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರದುರ್ಗದಲ್ಲಿ ಪ್ರೊಬೇಷನರಿ ಉಪವಿಭಾಗಾಧಿಕಾರಿಯಾಗಿ, ಮೈಸೂರು ಕಾರ್ಪೋರೇಷನ್ ಕೌನ್ಸಿಲ್ ಕಾರ್ಯದರ್ಶಿ, ಹುಣಸೂರು ಉಪವಿಭಾಗಾಧಿಕಾರಿ, ಮೈಸೂರು ಮುಡಾ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ ಇಲಾಖೆಯ […]