ಕೇಂದ್ರ ಸರಕಾರದಿಂದ ನೂತನ ಸಹಕಾರ ಸಚಿವಾಲಯ ರಚನೆ: ಯಶ್ಪಾಲ್ ಸುವರ್ಣ ಸ್ವಾಗತ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ನೂತನ ಸಹಕಾರ ಸಚಿವಾಲಯ ರಚನೆ ಮಾಡುವ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ದೇಶದ ಸುಮಾರು 35 ಕೋಟಿ ನಾಗರಿಕರು ಸಹಕಾರಿ ಸಂಘಗಳ ಸದಸ್ಯರಾಗಿ ಸಹಕಾರಿ ಕ್ಷೇತ್ರದ ಮೂಲಕ ತಮ್ಮ ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸುತ್ತಿರುವ ಸಹಕಾರಿ ಕ್ಷೇತ್ರಕ್ಕೆ ಇನ್ನಷ್ಟು ಶಕ್ತಿತುಂಬುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಧಾರ ಅಭಿನಂದನೀಯ […]