ಉಡುಪಿ ಜಿಲ್ಲಾಡಳಿತದಿಂದ ಹೊಸ ನಿಯಮ ಜಾರಿ; ಲಾಕ್ ಡೌನ್ ಮುಗಿಯುವವರೆಗೂ ಮದುವೆಗೆ ಅವಕಾಶವಿಲ್ಲ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಪೈಕಿ ಮದುವೆ, ಮೆಹಂದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಲ್ಲಿ ಹಾಗೂ ಅನಗತ್ಯವಾಗಿ ತಿರುಗಾಡುತ್ತಿರುವವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸೋಂಕನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ನಾಳೆಯಿಂದ (ಮೇ 25) ಜೂನ್ 7ರ ವರೆಗೆ ಮದುವೆ ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಇಂದು ನಡೆದ ಸಭೆಯ ಬಳಿಕ ಜಿಲ್ಲೆಯಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಇಂದಿನವರೆಗೆ (ಮೇ […]