ನೂತನ ಮರಳು ನೀತಿ ಜಾರಿ: ಇನ್ಮುಂದೆ ಬಡವರಿಗೆ, ರೈತರಿಗೆ ರಿಯಾಯಿತಿ ದರದಲ್ಲಿ ಸಿಗಲಿದೆ ಮರಳು..!!

ಬೆಂಗಳೂರು: ನದಿ, ತೊರೆ, ಹಳ್ಳ, ಕೆರೆ, ಜಲಾಶಯಗಳ ಪಾತ್ರಗಳಲ್ಲಿರುವ ಮರಳು ಗಣಿಗಾರಿಕೆ ನಡೆಸಿ, ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣ ವಸತಿ ಯೋಜನೆಗಳಿಗೆ ಮತ್ತು ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ರಿಯಾಯ್ತಿ ದರದಲ್ಲಿ ಮರಳು ಪೂರೈಕೆ ಮಾಡಲು ನೀತಿಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ದಕ್ಷಿಣ ಕನ್ನಡದಲ್ಲಿ […]