ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಶುಭಾರಂಭ

ಉಡುಪಿ: ಕಲ್ಯಾಣಪುರ ಸಂತೆಕಟ್ಟೆಯ ಜಿಎಸ್‌ಜೆ ಗ್ಯಾಲಕ್ಸಿ ಕಾಂಪ್ಲೆಕ್ಸ್ ನಲ್ಲಿ ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸೋಮವಾರ ಶುಭಾರಂಭಗೊಂಡಿತು. ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್.ಕೆ ಅವರು, ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅನುಭವವುಳ್ಳ ತಂಡವನ್ನು‌ ಹೊಂದಿದ್ದು, ಕಾನೂನಾತ್ಮಕ ವಿಚಾರಗಳಲ್ಲಿಯೂ ಈ ತಂಡ ಉತ್ತಮವಾಗಿದೆ. ಈ ಸೊಸೈಟಿ ಎತ್ತರಕ್ಕೆ ಬೆಳೆದು ಹಲವಾರು ಶಾಖೆಗಳನ್ನು ತೆರೆಯುವಂತಾಗಲಿ ಎಂದು ಹಾರೈಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, […]