ಗೂಗಲ್ : ಆಂಡ್ರಾಯ್ಡ್ ಬಳಕೆದಾರರಿಗೆ ಭೂಕಂಪ ಮುನ್ನೆಚ್ಚರಿಕೆ ವ್ಯವಸ್ಥೆ ಜಾರಿ
ನವದೆಹಲಿ : ಭಾರತದಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗಾಗಿ ಭೂಕಂಪದ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆಯನ್ನು ಗೂಗಲ್ ಬುಧವಾರದಿಂದ ಜಾರಿಗೊಳಿಸಿದೆ.ಭೂಕಂಪವಾದಾಗ ಜನರು ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ನೀಡುವಂತೆ ಈ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಇದು ಆಂಡ್ರಾಯ್ಡ್ ಸ್ಮಾರ್ಟ್ಪೋನ್ ಬಳಕೆದಾರರಿಗೆ ಲಭ್ಯವಿರುತ್ತದೆ. ವಿಶ್ವದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪಗಳ ಪಾಲು ದೊಡ್ಡದಾಗಿದೆ. ಭೂಕಂಪ ಸಂಭವಿಸಿದಾಗ ತಕ್ಷಣ ನೀಡುವ ಎಚ್ಚರಿಕೆಯು ಜನ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಇತರರನ್ನು ಕೂಡ ರಕ್ಷಿಸಲು ಬಹಳ ಉಪಯುಕ್ತವಾಗುತ್ತದೆ.ಆಂಡ್ರಾಯ್ಡ್ ಬಳಕೆದಾರರಿಗೆ ಭೂಕಂಪದ ಮುನ್ನೆಚ್ಚರಿಕೆ […]