ಅಥ್ಲೀಟ್ ದ್ಯುತಿ ಚಂದ್​ ಉದ್ದೀಪನ ಮದ್ದು ಸೇವನೆ ಹಿನ್ನೆಲೆ : 4 ವರ್ಷ ನಿಷೇಧ

ನವದೆಹಲಿ: ಏಷ್ಯನ್‌ ಗೆಮ್ಸ್​​ನಲ್ಲಿ ಎರಡು ಬೆಳ್ಳಿ ಪದಕ ಸಂಪಾದಿಸಿದ ಭಾರತದ ಮಹಿಳಾ ಅಥ್ಲೀಟ್ ದ್ಯುತಿ ಚಂದ್ ಅವರಿಗೆ ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆಯು (WADA) ನಾಲ್ಕು ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಿದೆ.ಕಳೆದ ವರ್ಷ ಡಿಸೆಂಬರ್ 5ರಂದು ಸಂಗ್ರಹಿಸಿದ್ದ ಮಾದರಿಯಲ್ಲಿ ಆಂಡ್ರೊಜೆನ್ ರಿಸೆಪ್ಟರ್ ಮಾಡ್ಯುಲೇಟರ್‌ಗಳಿಗೆ (ಎಸ್‌ಎಆರ್‌ಎಂ) ಕಂಡು ಬಂದಿದ್ದರಿಂದ ನಿಷೇಧ ಹೇರಲಾಗಿದೆ. ಹೀಗಾಗಿ ಮುಂದಿನ ನಾಲ್ಕು ವರ್ಷಗಳ ಕಾಲ ದ್ಯುತಿ ಯಾವುದೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತಿಲ್ಲ. ನಿಷೇಧದ ಅವಧಿ ಜನವರಿ 3, […]