ಯುವ ಪ್ರತಿಭೆಗೆ ಅವಕಾಶ: ಏಷ್ಯನ್ ಗೇಮ್ಸ್​ನಿಂದ ಹಿಂದೆ ಸರಿದ ವಿನೇಶ್ ಫೋಗಟ್

ನವದೆಹಲಿ: ಏಷ್ಯನ್ ಗೇಮ್ಸ್ ಟ್ರಯಲ್ಸ್‌ನಿಂದ ವಿನಾಯಿತಿ ಪಡೆದು ನೇರಪ್ರವೇಶ ಪಡೆದುಕೊಂಡಿದ್ದ ಫೋಗಟ್ ಗಾಯದ ಕಾರಣದಿಂದಾಗಿ ಆಡುತ್ತಿಲ್ಲ ಎಂದು ತಿಳಿಸಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್ (IWF) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ವಿನೇಶ್ ಫೋಗಟ್ ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಿಂದ ಹಿಂದೆ ಸರಿದಿದ್ದಾರೆ.ಸೆಪ್ಟೆಂಬರ್ 23ರಿಂದ ಚೀನಾದದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಿಂದ ವಿನೇಶ್ ಫೋಗಟ್ ಹಿಂದೆ ಸರಿದಿದ್ದಾರೆ. ತಮ್ಮ ಎಕ್ಸ್‌ಆಯಪ್​ ಖಾತೆಯಲ್ಲಿ ಪತ್ರವೊಂದನ್ನು ಪೋಸ್ಟ್​ ಮಾಡಿರುವ ಅವರು, “ನಾನು […]