ಕೇಂದ್ರ ಸಂಪುಟ ಒಪ್ಪಿಗೆ : ಹಿಂಗಾರು ಹಂಗಾಮಿಗೆ ರಸಗೊಬ್ಬರಗಳ ಮೇಲೆ ₹22,303 ಕೋಟಿ ಸಬ್ಸಿಡಿ
ನವದೆಹಲಿ: ರೈತರು ರಬಿ ಬೆಳೆಗಳಿಗೆ ಬೇಕಾಗುವ ಮತ್ತು ಮಣ್ಣಿನ ಪೋಷಕಾಂಶ ಹೆಚ್ಚಿಸುವ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸಬ್ಸಿಡಿ ನೀಡಲು ಬುಧವಾರ ನಡೆಸ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ.ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಮತ್ತು ಬೆಲೆ ಏರಿಕೆಯಿಂದ ಅಪಾರ ನಷ್ಟಕ್ಕೀಡಾಗಿರುವ ಕೃಷಿ ಕ್ಷೇತ್ರದ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ, ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೇಕಾಗುವ ರಸಗೊಬ್ಬರಗಳ ಮೇಲೆ 22,303 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ.ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಲಾಗಿದೆ. […]