ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಚಂದ್ರಯಾನ 3 ಯಶಸ್ವಿಯಾಗಲೆಂದು ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು
ನವದೆಹಲಿ : ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲೆಂದು ದೇಶ ಸೇರಿದಂತೆ ಪ್ರಪಂಚಾದ್ಯಂತ ಭಕ್ತರು ಪ್ರಾರ್ಥನೆ […]