ಭಾರತದಲ್ಲಿ ಶೇ 10ರಷ್ಟು ಹೆಚ್ಚಳ : ವಿಶ್ವದಲ್ಲಿ ಚಿನ್ನಕ್ಕೆ ಬೇಡಿಕೆ ಕುಸಿತ

ನವದೆಹಲಿ: 2023ರ ಮೂರನೇ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಚಿನ್ನದ ಬೇಡಿಕೆಯು ಶೇ 6ರಷ್ಟು ಕುಸಿದು 1,147.5 ಟನ್ಗಳಿಗೆ ತಲುಪಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ) ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಚಿನ್ನದ ಗಟ್ಟಿಗಳು ಮತ್ತು ನಾಣ್ಯಗಳ ಬೇಡಿಕೆ ಕಡಿಮೆಯಾಗಿರುವುದು ಮತ್ತು ಕೇಂದ್ರೀಯ ಬ್ಯಾಂಕುಗಳಿಂದ ಖರೀದಿ ಕಡಿಮೆಯಾದ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ಇಳಿಮುಖವಾಗಿದೆ. 2023ರ ಮೂರನೇ ತ್ರೈಮಾಸಿಕದಲ್ಲಿ ವಿಶ್ವದಲ್ಲಿ ಚಿನ್ನದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕವಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳ ಬೇಡಿಕೆ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 14ರಷ್ಟು […]