ಡಾಲರ್ ಎದುರು ರೂಪಾಯಿ ಕುಸಿತ ನಿಫ್ಟಿ 100 & ಸೆನ್ಸೆಕ್ಸ್ 388 ಅಂಕ ಇಳಿಕೆ

ನವದೆಹಲಿ :ಆಗಸ್ಟ್ನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಶೇರು ಮಾರುಕಟ್ಟೆಯಿಂದ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹೂಡಿಕೆಯನ್ನು ಹಿಂಪಡೆದಿರುವುದು ಕೂಡ ರೂಪಾಯಿ ಮೌಲ್ಯದ ಮೇಲೆ ಪರಿಣಾಮ ಬೀರಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್ನ ರಿಟೇಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ. ಪ್ರಸ್ತುತ ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ವ್ಯಾಪಿಸಿರುವ ನಕಾರಾತ್ಮಕ ಭಾವನೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ 10 ತಿಂಗಳ ಕನಿಷ್ಠವಾದ 83.14ಕ್ಕೆ ಕುಸಿದಿದೆ. ಗುರುವಾರದ ವಹಿವಾಟಿನಲ್ಲಿ ಭಾರತದ ಶೇರು ಮಾರುಕಟ್ಟೆ […]