ಮೋದಿ ಕೃತಜ್ಞತೆ : 11 ದಿನದಲ್ಲಿ ಪಿಎಂ ಮೋದಿ ವಾಟ್ಸ್ಆಯಪ್ ಚಾನೆಲ್ಗೆ 5 ಮಿಲಿಯನ್ ಫಾಲೋವರ್ಸ್

ನವದೆಹಲಿ:ಸೆಪ್ಟೆಂಬರ್ 14ರಂದು ಪ್ರಧಾನಿಗಳು ಮೊದಲ ಬಾರಿಗೆ ವಾಟ್ಸ್ಆಯಪ್ಗೆ ಅಡಿ ಇಟ್ಟಿದ್ದರು. ಇವತ್ತು 11 ದಿನಗಳ ಬಳಿಕ ಅವರ ಫಾಲೋವರ್ಸ್ ಸಂಖ್ಯೆ 53 ಲಕ್ಷ ಮುಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಅತಿಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ವಿಶ್ವನಾಯಕರಲ್ಲಿ ಪ್ರಮುಖರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾಟ್ಸ್ಆಯಪ್ನಲ್ಲೂ ಕಿಂಗ್ ಎನಿಸಿಕೊಳ್ಳುವತ್ತ ಸಾಗುತ್ತಿದ್ದಾರೆ. ‘ನಾವು 50 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಆಗಿರುವುದರಿಂದ, ನನ್ನ ವಾಟ್ಸ್ಆಯಪ್ ಚಾನೆಲ್ ಮೂಲಕ ನನ್ನೊಂದಿಗೆ ಸಂಪರ್ಕ ಹೊಂದಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬರ ನಿರಂತರ ಬೆಂಬಲಕ್ಕೆ ಕೃತಜ್ಞರಾಗಿರುತ್ತೇನೆ. […]