ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಭಿನ್ನವಾಗಿ ಪ್ರೇಮಿಗಳ ದಿನಾಚರಣೆ

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್‌ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಬೀಡಿನಗುಡ್ಡೆಯ ನಿರಾಶ್ರಿತರ ಕೇಂದ್ರದಲ್ಲಿ ಗುರುವಾರ ನಿರ್ಗತಿಕರನ್ನು ಕರೆದುಕೊಂಡು ಬಂದು ಅವರನ್ನು ಆರೈಕೆ ಮಾಡಿ ಅವರೊಂದಿಗೆ ಊಟ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಮನೆಯಿಂದ ಹೊರಹಾಕಲ್ಪಟ್ಟ ವೃದ್ಧರು, ಬಸ್‌ ನಿಲ್ದಾಣಗಳಲ್ಲಿ ಅಲೆದಾಡುತ್ತಿದ್ದ ನಿರ್ಗತಿಕರು ಹಾಗೂ ಮಾನಸಿಕ ಅಸ್ವಸ್ಥರು ಸೇರಿದಂತೆ ಒಟ್ಟು ಐದಾರು ಮಂದಿ ನಿರಾಶ್ರಿತರನ್ನು ಕರೆದುಕೊಂಡು ಬಂದು ಅವರಿಗೆ ಸ್ನಾನ ಮಾಡಿ ಅವರನ್ನು ಶುಚಿಗೊಳಿಸಿ ಅವರಿಗೆ ಹೊಸ ಬಟ್ಟೆಗಳನ್ನು […]