ಕರೋನಾ ಖಚಿತಗೊಂಡ ರೋಗಿಗಳಿಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾಹೆ‌ ನಿರ್ಧಾರ

ಮಣಿಪಾಲ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಮತ್ತು ಉಂಟಾಗುವ ಸವಾಲುಗಳನ್ನು ಎದುರಿಸಲು ಅಗತ್ಯವಾದ  ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರದ  ಬೆಂಬಲದೊಂದಿಗೆ, ಕರೋನಾ ವೈರಸ್ (ಕೋವಿಡ್ – 19) ಖಚಿತಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಟ್ಟಿದೆ. ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು 100 ಹಾಸಿಗೆಗಳ ಆಸ್ಪತ್ರೆಯಾಗಿದ್ದು,11 ತೀವ್ರ […]