ದ.ಕ.ಜಿಲ್ಲೆ ಲಾಕ್ ಡೌನ್ ಸಡಿಲಿಕೆ: ಕಾರ್ಯಕ್ರಮಗಳು ನಿಷೇಧ; ರಾತ್ರಿ 7ರಿಂದ ಎಲ್ಲವೂ ಬಂದ್
ಮಂಗಳೂರು: ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ ಕುರಿತು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳು ಸಂಚರಿಸಬಹುದಾಗಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಸ್ಥಳೀಯ […]