ಮುಂಬೈನಿಂದ ಕುಂದಾಪುರದತ್ತ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಬೆಂಕಿಗಾಹುತಿ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರೂ ಪಾರು

ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್ ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ವೇಳೆಯಲ್ಲಿ ಟೆಂಪೋ ಟ್ರಾವೆಲ್ಲರ್ ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ. ಸೇವಾಸಿಂಧು ಆಪ್ ಮೂಲಕ ಕುಂದಾಪುರದ ವಂಡ್ಸೆ ಸಮೀಪದ ತಾರಿಬೇರು ಕುಟುಂಬದ ಹನ್ನೊಂದು ಮಂದಿ ಸೋಮವಾರ ಟೆಂಪೋ ಟ್ರಾವೆಲ್ಲರ್ ನಲ್ಲಿ ಮುಂಬೈನ ಭಾಂಡುಪ್ ನಿಂದ ಊರಿಗೆ ಪ್ರಯಾಣ ಬೆಳೆಸಿದ್ದರು. ಮೂರುವರೆ ಗಂಟೆ ಪ್ರಯಾಣ ಮುಗಿಸಿ ಲೋನಾವಾಲಾ ಸಮೀಪಿಸುತ್ತಿದ್ದಂತೆಯೇ ಟಿಟಿ ಸ್ಟೇರಿಂಗ್ ಸಮೀಪದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲೇ ಬೆಂಕಿ ಇಡೀ ವಾಹನಕ್ಕೆ ವ್ಯಾಪಿಸಿದ್ದು, ಚಾಲಕನ […]