ಮಳೆಗಾಗಿ ಕರಾವಳಿಯ ದೇವಸ್ಥಾನಗಳಲ್ಲಿ ಪರ್ಜನ್ಯ ಜಪ ವಿಶೇಷ ಪೂಜೆ

ಮಂಗಳೂರು: ಮಳೆಗಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಯ ಕರಾವಳಿಯ ದೇವಾಲಯಗಳಲ್ಲಿ ಗುರುವಾರ ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆಗಳು ನಡೆಯಿತು. ಅದರಂತೆ ಇತಿಹಾಸ ಪ್ರಸಿದ್ಧ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ವಿಶ್ವಶ್ರೀ ವಿಠಲದಾಸ್ ತಂತ್ರಿ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಪರ್ಜನ್ಯ ಜಪ ನೆರವೇರಿಸಲಾಯಿತು. ಪೂಜಾ ಕೈಂಕರ್ಯದಲ್ಲಿ ವಿವಿಧ ಭಾಗಗಳ ನೂರಾರು ಭಕ್ತರು ಭಾಗವಹಿಸಿದ್ದರು.