ಉಡುಪಿ: ಕರ್ತವ್ಯಕ್ಕೆ ಮರಳಿದ ದಿನವೆ ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೆಬಲ್

ಉಡುಪಿ: ಕರ್ತವ್ಯದ ವೇಳೆ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೆಬಲ್ ರಾಜೇಶ್ ಕುಂದರ್ ಅಮಾನತುಗೊಂಡ ಬಳಿಕ ಮತ್ತೆ ಕೆಲಸಕ್ಕೆ ಸೇರಿದ್ದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ರಾಜೇಶ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದರು. ಇವರು ಆದಿ ಉಡುಪಿಯ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸ್ಟೋರ್ ರೂಮಿನ ಹೊರಗೆ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಇತರ ಸಿಬ್ಬಂದಿಗಳು […]
ಲಾಕ್ ಡೌನ್ ಮುಗಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ನಿರ್ಧಾರ: ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಕೊರೊನಾ ವೈರಸ್ ನಿಂದ ಲಾಕ್ ಡೌನ್ ಜಾರಿಯಾಗಿದ್ದು, ಲಾಕ್ ಡೌನ್ ಮುಗಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್ ಅವರು, ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಬೇಕು, ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ. ಎಸ್ಸೆಸ್ಸೆಲ್ಸಿಗಿಂತ ದೊಡ್ಡ ಪರೀಕ್ಷೆ ಕೊರೊನಾ ವಿರುದ್ಧ ಹೋರಾಡುವುದು. ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಪರೀಕ್ಷೆ ನಡೆಯುತ್ತದೆ. […]