ಕೊರೊನಾ ಹಿನ್ನೆಲೆ ಜನವರಿ 2021 ಕ್ಕೆ ಸೇನಾ ನೇಮಕಾತಿ ರ್ಯಾಲಿ ಮುಂದೂಡಿಕೆ: ಕರ್ನಲ್ ಎಫ್.ಪಿ. ದುಬಾಶ್

ಉಡುಪಿ ಮಾ.16: ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಮುಂಜಾಗೃತ ಕ್ರಮವಾಗಿ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್ 4 ರಿಂದ 14 ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಸೇನಾ ನೇಮಕಾತಿ ರ್ಯಾಲಿಯನ್ನು ರದ್ದುಗೊಳಿಸಿ, ಜನವರಿ 2021 ಕ್ಕೆ ಮುಂದೂಡಲಾಗಿದೆ. ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಯನ್ನು ಜನವರಿ 2021 ರ ಸೇನಾ ರ್ಯಾಲಿಯಲ್ಲಿ ಪರಿಗಣಿಸಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯ ಅರ್ಹತಾ ಮಾನದಂಡಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ, ಅಭ್ಯರ್ಥಿಗಳಲ್ಲಿ ಯಾವುದೇ ಗೊಂದಲ […]