ಉಡುಪಿಯಲ್ಲಿ ಇಂದು 134 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಇಂದು ಒಂದೇ ದಿನ 134 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿಯಲ್ಲಿ ಮತ್ತೆ ಕೊರೊನಾ ಆರ್ಭಟ: 71 ವರ್ಷದ ವೃದ್ಧ ಸಹಿತ 22 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದಿರುವ 21 ಮಂದಿಯಲ್ಲಿ ಹಾಗೂ ಸ್ಥಳೀಯ ಕೊರೊನಾ ಸೋಂಕಿತ ಲ್ಯಾಬ್ ಟೆಕ್ನಿಷನ್ ಮನೆಯ 71 ವರ್ಷದ ವೃದ್ಧನಲ್ಲಿ ಇಂದು ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ಸೋಂಕು ಕಾಣಿಸಿಕೊಂಡ 22 ಮಂದಿಯ ಪೈಕಿ 13 ಪುರುಷರು, 6 ಮಹಿಳೆಯರು ಹಾಗೂ ಮೂವರು ಮಕ್ಕಳು ಇದ್ದಾರೆ. ಜಿಲ್ಲೆಯಲ್ಲಿ ಇಂದು 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 708 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ ಸೋಂಕಿತರಿಗೆ […]