ಉಡುಪಿಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ: ತಾಯಿ, ಮಗು ಸುರಕ್ಷಿತ

ಉಡುಪಿ: ಕೋವಿಡ್ 19 ಸೋಂಕಿದ್ದ ಕಾರ್ಕಳ ತಾಲ್ಲೂಕಿನ 22 ವರ್ಷದ ತುಂಬು ಗರ್ಭಿಣಿಗೆ ಉಡುಪಿ ಡಾ. ಟಿಎಂಎ ಪೈ ಕೋವಿಡ್ 19 ಆಸ್ಪತ್ರೆಯಲ್ಲಿ ಯಶಸ್ವಿ ಹೆರಿಗೆ ಮಾಡಲಾಗಿದೆ. ಈ ಗರ್ಭಿಣಿ ಜೂನ್ 16 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನವೇ ಗರ್ಭಿಣಿಗೆ ತುರ್ತು ಸಿಸೇರಿಯನ್ ಹೆರಿಗೆ ಮಾಡಲಾಗಿತ್ತು. ಇದೀಗ ತಾಯಿ ಚೇತರಿಸಿಕೊಳ್ಳುತ್ತಿದ್ದು, ನವಜಾತ ಶಿಶು ಆರೋಗ್ಯವಾಗಿದೆ. ಪ್ರಸೂತಿ ತೊಂದರೆ ಕಾರಣಗಳಿಂದಾಗಿ ಈ ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಜಿಲ್ಲೆಯಲ್ಲಿ ಕೋವಿಡ್-19 ರೋಗಿಗೆ ಇದು ಮೊದಲ ಶಸ್ತ್ರಚಿಕಿತ್ಸೆ. ಪ್ರಸೂತಿ ಶಸ್ತ್ರಚಿಕಿತ್ಸಕರಾದ ಡಾ. […]
ಉಡುಪಿಯ ಎರಡನೆ ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್: 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ

ಉಡುಪಿ: ಜಿಲ್ಲೆಯ ಎರಡನೇ ಕೊರೊನಾ ಸೋಂಕಿತ (ಕೋವಿಡ್-19) ಮಣಿಪುರದ 35ರ ಹರೆಯದ ಯುವಕ ಸಂಪೂರ್ಣ ಗುಣಮುಖನಾಗಿದ್ದು, ಆತನನ್ನು ಇಂದು ಮಧ್ಯಾಹ್ನದ ವೇಳೆಗೆ ಉಡುಪಿಯ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಹೇಳಿದ್ದಾರೆ. ಈತನ ಗಂಟಲಿನ ದ್ರವದ ಮಾದರಿಯನ್ನು ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, ಇದೀಗ ಆತ ಸೋಂಕಿನಿಂದ ಸಂಪೂರ್ಣ ಚೇತರಿಸಿ ಕೊಂಡಿರುವುದು ಖಚಿತವಾಗಿದೆ. […]