ಉಡುಪಿಯ ಮೂರು ಕೊರೊನಾ ಸೋಂಕಿತರು ಗುಣಮುಖ, ಸದ್ಯದಲ್ಲೇ ಡಿಸ್ಚಾರ್ಜ್: ಡಿಸಿ ಜಗದೀಶ್

ಉಡುಪಿ: ಜಿಲ್ಲೆಯ ಮೂವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಅವರನ್ನು ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಎಲ್ಲ ವ್ಯಕ್ತಿಗಳಲ್ಲಿ ನೆಗೆಟಿವ್ ವರದಿ ಬಂದಿದೆ. ಹಾಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆತಂಕ ದೂರ ಆಗಿದೆ ಎಂದಿದ್ದಾರೆ. ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಸೋಂಕು ಹರಡುವ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಉಡುಪಿ ಜಿಲ್ಲೆಗೆ ಬೇರೆ ಜಿಲ್ಲೆ ಹಾಗೂ ರಾಜ್ಯದ ಜನರ […]