ಹೆಚ್ಚಿನ ದರಕ್ಕೆ ಮಾರಾಟ, ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಉಡುಪಿ ಮಾ.26: ಜಿಲ್ಲೆಯಾದ್ಯಂತ  ತರಕಾರಿ, ದಿನಸಿ, ಮೀನು, ಮಾಂಸ , ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು  ಮುಂತಾದವುಗಳನ್ನು ಮಾರಾಟ ಮಾಡುವ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳ ಎದುರಿನಲ್ಲಿ  ಕನಿಷ್ಠ 6 ಅಡಿಗಳ ಅಂತರದಲ್ಲಿ ಕಡ್ಡಾಯವಾಗಿ ಪೇಂಟ್ ಅಥವಾ ಇನ್ನಿತರ ಬಣ್ಣದ ವಸ್ತುಗಳಿಂದ ಗುರುತನ್ನು ಹಾಕುವುದು ಹಾಗೂ ಸಾರ್ವಜನಿಕರು/ಗ್ರಾಹಕರು ಗುರುತುಗಳ ಸರತಿ ಸಾಲಿನಲ್ಲಿ ನಿಂತು ವಸ್ತುಗಳನ್ನು ಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಈ ನಿರ್ದೇಶನಗಳನ್ನು ಪಾಲಿಸದ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅಲ್ಲದೇ […]