ಇ ಪಾಸ್ ಮೂಲಕ ಮಾತ್ರ ಪಾಸ್‌ಗಳ ವಿತರಣೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಮೇ 3: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಸ್ತುತ ನಿರ್ಬಂದಾಜ್ಞೆ ಜ್ಯಾರಿಯಲ್ಲಿದ್ದು ಈ ಸಂದರ್ಭದಲ್ಲಿ ಯಾವುದೇ ನಾಗರೀಕರ ಓಡಾಟವನ್ನು ನಿರ್ಬಂಧಿಸಲಾಗಿರುತ್ತದೆ. ಪ್ರಸ್ತುತ ಉಡುಪಿ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಆಥವಾ ಹೊರಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಬರುವುದಕ್ಕೆ ನಿರ್ಬಂಧಗಳಿವೆ, ಅಲ್ಲದೇ ಈ ಬಗ್ಗೆ ಸಾರ್ವತ್ರಿಕವಾದ ಅನುಮತಿ ಇರುವುದಿಲ್ಲ, ಕೇವಲ ತುರ್ತು ವೈದ್ಯಕೀಯ ಕಾರಣಗಳಿಂದಾಗಿ ಹೋಗ ಬೇಕಾದಲ್ಲಿ ಆಥವಾ ವೈದ್ಯಕೀಯ ಉಪಕರಣಗಳ ಉತ್ಪಾದನಾ ಘಟಕ, Defence Production ಮುಂತಾದ ಅಗತ್ಯ ಕರ್ತವ್ಯಕ್ಕೆ (Essential Services Sector) ಹಾಜರಾಗಲು ಅಂತರ್ […]