ಗೇರು ಬೀಜ ಸಂಸ್ಕರಣಾ ಘಟಕ ಆರಂಭಕ್ಕೆ ಷರತ್ತು ಬದ್ದ ಅನುಮತಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಏ.15: ಕೊರೋನಾ ವೈರಾಣು ಸಾಂಕ್ರಾಮಿಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು  ಕೆಲವೊಂದು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ನಡುವೆ ಆಹಾರ ಸಂಸ್ಕರಣೆ ಘಟಕಗಳಿಗೆ ಕಾರ್ಯಾಚರಣೆ ಮಾಡಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಈಗ ಮಾರುಕಟ್ಟೆಗೆ ಆಗಮಿಸುತ್ತಿರುವ ಸ್ಥಳೀಯ ಗೇರು ಬೀಜ ಕೃಷಿಕರಿಗೆ ಉತ್ತಮ ಧಾರಣೆ ಒಗದಿಸಿಕೊಟ್ಟು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ , ಗೇರು ಬೀಜ ಸಂಸ್ಕರಣಾ ಘಟಕಗಳನ್ನು  ಕೆಲವೊಂದು ಷರತ್ತು ವಿಧಿಸಿ ಕಾರ್ಯಚರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ. ಸಂಸ್ಕರಣಾ ಘಟಕದ ಒಟ್ಟು ಕಾರ್ಮಿಕರ 25% ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡು. […]