ಉಡುಪಿ: ಕೊರೊನಾದಿಂದ ಗುಣಮುಖರಾದ 18 ಮಕ್ಕಳು ಸಹಿತ 45 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 18 ಮಕ್ಕಳು ಸಹಿತ ಒಟ್ಟು 45 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು  ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದವರಲ್ಲಿ ಬಹುತೇಕರು ಮುಂಬೈ ಹಾಗೂ ದುಬೈನಿಂದ ಬಂದವರಾಗಿದ್ದಾರೆ.  ಕೊರೊನಾ ವಿರುದ್ಧ ಹೋರಾಡಿ ಗೆದ್ದು ಬಂದ ಒಂದು ವರ್ಷದ ಮಗು ಸೇರಿದಂತೆ 18 ಮಕ್ಕಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಚಾಕಲೇಟ್, ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟರು. ಬಳಿಕ ಸುದ್ದಿಗಾರರೊಂದಿಗೆ […]