ಪಾದರಾಯನಪುರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಲಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ
ಉಡುಪಿ: ಬೆಂಗಳೂರಿನ ಪಾದರಾಯನಪುರದಲ್ಲಿ ರವಿವಾರ ಸಂಜೆ ನಡೆದಿರುವ ಘಟನೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕ್ವಾರಂಟೈನ್ ನಲ್ಲಿ ಕೊರೋನ ಸೋಂಕು ಶಂಕಿತರನ್ನು ಕ್ವಾರಂಟೈನ್ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಗಲಾಟೆ ನಡೆಸಿ ಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಅತ್ಯಂತ ಖಂಡನೀಯ ಎಂದು ಹೇಳಿರುವ ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, […]