ಕ್ವಾರಂಟೈನ್ ನಿಯಮದ ಪಾಲನೆ ಪರಿಶೀಲನೆಗೆ ಕ್ರಮ: ಮಹೇಶ್ವರ ರಾವ್

ಏಪ್ರಿಲ್ 12: ಜಿಲ್ಲೆಯಲ್ಲಿ ಕೋರೋನಾ ಸಂಬಂದಿಸಿದಂತೆ, ಹೋಂ ಕ್ವಾರಂಟೈನ್ ನಲ್ಲಿರುವವರು ಮತ್ತು ಆಸ್ಪತ್ರೆ ಕ್ವಾರಂಟೈನ್‍ನಲ್ಲಿರುವವರು, ಸರಕಾರದ ಮಾರ್ಗಸೂಚಿಯನ್ವಯ ನಿಯಮಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಭಾನುವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ,ಜಿಲ್ಲೆಯಲ್ಲಿನ  ಕೊರೋನಾ ನಿಯಂತ್ರಣ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲಿಸುತ್ತಿರುವ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ, ಬಗ್ಗೆ ಜಿಲ್ಲೆಯ ಗಡಿ ಪ್ರದೇಶಗಳನ್ನು ಬಿಗಿಗೊಳಿಸುವಂತೆ ಸೂಚಿಸಿದ ಉಸ್ತುವಾರಿ […]