ಮಂಗನ ಕಾಯಿಲೆ ಬಗ್ಗೆ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತಾ ಕ್ರಮ- ಡಿಸಿ

ಉಡುಪಿ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಎಲ್ಲಾ ರೀತಿಯವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.ಅವರು ಸೋಮವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಡಿನಲ್ಲಿ ಮಂಗಗಳು ಸಾಯುವುದು ಈ ರೋಗದ ಮುನ್ಸೂಚನೆಯಾಗಿದ್ದು, ಕಾಯಿಲೆಯುಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ, ಸತತ ಎಂಟ ರಿಂದ ಹತ್ತು ದಿನಗಳವರೆಗೆ ಬಿಡದೇ ಬರುವ ಜ್ವರ, ವಿಪರೀತ ತಲೆನೋವು, ಸೊಂಟ ನೋವು, ಕೈಕಾಲು ನೋವು, ನಿಶ್ಯಕ್ತಿ, ಕಣ್ಣು ಕೆಂಪಾಗುವುದು, […]