ಅರೆಬರೆ ಚತುಷ್ಪತ ಹೆದ್ದಾರಿ ಕಾಮಗಾರಿ: ಸಂಗಮ್ ಜಂಕ್ಷನ್‌ಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಂಪೆನಿ ಇಲ್ಲಿನ ಸಂಗಮ್ ಜಂಕ್ಷನ್‌ನಲ್ಲಿ ಅರೆಬರೆ ಕಾಮಗಾರಿ ನಡೆಸಿದ್ದರಿಂದ ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪರಿಶೀಲನೆ ನಡೆಸಿ ಗುತ್ತಿಗೆ ಕಂಪೆನಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮಳೆಗಾಲಕ್ಕೆ ಯಾವುದೇ ತಯಾರಿ ಮಾಡಿಕೊಳ್ಳದೆ ಅರೆಬರೆ ಹೆದ್ದಾರಿ ಕಾಮಗಾರಿ ನಡೆಸಲಾಗಿದ್ದು ಮತ್ತು ಸೂಕ್ತ ಚರಂಡಿ ವ್ಯವಸ್ಥೆ ಮಾಡದೆ ಇರುವುದರಿಂದ ಸ್ಥಳೀಯ ಕುಟುಂಬಗಳಿಗೆ ತೊಂದರೆಗಳಾಗುವ ಸಾಧ್ಯತೆ ಇರುವುದುರಿಂದ ಸ್ಥಳೀಯ ನಿವಾಸಿಗಳ ಮನವಿ ಮೇರೆಗೆ ಆಗಮಿಸಿದ ಸಂಸದೆ ಶೋಭಾ ಕರಂದ್ಲಾಜೆ ಶೀಘ್ರವೇ […]