ಸೋಲಾರ್ ದೀಪಗಳ ಕೊಡುಗೆಯ ಸಮಾರೋಪ ಸಮಾರಂಭ ಜೂ. 9 ಕ್ಕೆ
ಉಡುಪಿ: ಅಮಾಸೆಬೈಲು ಗ್ರಾಮದಲ್ಲಿ ಅನುಷ್ಠಾನಗೊಂಡಿರುವ ಸೋಲಾರ್ ದೀಪಗಳ ಕೊಡುಗೆಯ ಸಮಾರೋಪ ಸಮಾರಂಭ ಜೂ. 9ರಂದು ಬೆಳಿಗ್ಗೆ 10.30ಕ್ಕೆ ಅಮಾಸೆಬೈಲು ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎ.ಜಿ. ಕೊಡ್ಗಿ ಹೇಳಿದರು. ಅಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಭಟ್ ಅಧ್ಯಕ್ಷತೆ ವಹಿಸುವರು. ಸೆಲ್ಕೋ ಇಂಡಿಯಾದ ಅಧ್ಯಕ್ಷ ಡಾ. ಎಚ್. ಹರೀಶ್ […]