ಬಾಲ ಕಾರ್ಮಿಕರ ಪತ್ತೆಗೆ ದಾಳಿ ನಡೆಸಿ: ಉಡುಪಿ ಅಪರ ಜಿಲ್ಲಾಧಿಕಾರಿ

ಉಡುಪಿ :ಜಿಲ್ಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಹಲವು ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚಿಸಿದ್ದಾರೆ.  ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆಗೆ ಮಾತ್ರ ಸಲ್ಲದು, ವಿವಿಧ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ […]