ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತ ತರಬೇತಿ: ಅರ್ಜಿ ಆಹ್ವಾನ
ಉಡುಪಿ: ಮಣಿಪಾಲ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ಜೂನ್ 17ರಿಂದ ೩೦ ದಿನಗಳ ‘ಮೊಬೈಲ್‌ರಿಪೇರಿ’, ೨೦ರಿಂದ ೪೫ ದಿನಗಳ ‘ಕಂಪ್ಯೂಟರ್ ಹಾರ್ಡ್ ವೇರ್ ಮತ್ತು ನೆಟ್‌ವರ್ಕಿಂಗ್’ ಹಾಗೂ ೨೪ರಿಂದ ೧೦ ದಿನಗಳ ‘ಕೋಳಿ ಸಾಕಾಣಿಕೆ’ ತರಬೇತಿಯನ್ನುಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿನೆಲೆಸಿರುವ ೧೮ ರಿಂದ ೪೫ ವರ್ಷದೊಳಗಿನ ನಿರುದ್ಯೋಗಿ ಯುವಕ–ಯುವತಿಯರು ಭಾಗವಹಿಸಬಹುದು. ತರಬೇತಿಯಲ್ಲಿ ಊಟ ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ತರಬೇತಿಯ ಜತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ […]