ಪಾದರಾಯನಪುರ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಬೆಂಗಳೂರಿನ ಪಾದರಾಯನಪುರ ದುರ್ಘಟನೆ ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯವನ್ನು ನಾಶಮಾಡಿದೆ. ಮತಾಂಧ ಗಲಭೆಕೋರರು ಕೊರೊನ ವೈರಸ್ಸಿಗಿಂತಲೂ ಅಪಾಯಕಾರಿಗಳಾಗಿದ್ದು, ರಾಜ್ಯ ಸರಕಾರ ಓಲೈಕೆ ರಾಜಕಾರಣವನ್ನು ಬಿಟ್ಟು ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮುಖಂಡ ಯಶ್ ಪಾಲ್ ಸುವರ್ಣ ಒತ್ತಾಯಿಸಿದ್ದಾರೆ. ಬೆಂಗಳೂರಿನ ಪಾದರಾಯನಪುರದಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೂಲಭೂತವಾದಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಾಕಿ ತೊಟ್ಟ ಪೊಲೀಸರಿಗೆ ತಲವಾರು ತೋರಿಸಿ ಸರಕಾರಿ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಿದ್ದಾರೆ. ಗೃಹಇಲಾಖೆಯ ಈ […]