ಮಂಗಳೂರು: ಹಜ್ ಯಾತ್ರಿಗಳ ವಿಮಾನ ಯಾತ್ರೆಗೆ ಬಜ್ಪೆ ಶಾಲೆಯಲ್ಲಿ ಚಾಲನೆ

ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ 2019ನೇ ಸಾಲಿನಲ್ಲಿ ಹೊರಡುವ ಹಜ್ಜಾಜ್‌ಗಳ ವಿಮಾನ ಯಾತ್ರೆಗೆ ಮಂಗಳೂರಿನ ಬಜ್ಪೆಯ ಖಾಸಗಿ ಸ್ಕೂಲ್ ನ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಯುಟಿ ಖಾದರ್ ಅವರು ಮಾತನಾಡಿ, ಹಜ್ ಯಾತ್ರೆಯ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಕೋಟ್ಯಾಧಿಪತಿಯು ಹಜ್ ಯಾತ್ರೆಯ ಅವಕಾಶದಿಂದ ವಂಚಿತರಾಗಿದ್ದೇವೆ. ನಿರ್ಗತಿಕರು ಹಜ್ ಯಾತ್ರೆ ಪೂರೈಸಿದ್ದಿದೆ. ಅದೆಲ್ಲಾ ಅಲ್ಲಾಹನ ಅನುಗ್ರಹವಾಗಿದೆ. ಹಾಗಾಗಿ ಪವಿತ್ರ ಹಜ್ ಯಾತ್ರೆಯಲ್ಲಿ ದೇಶದ […]
ಆಗಸ್ಟ್ ಅಂತ್ಯದೊಳಗೆ ಪಿ.ಜಿ. ಗಳ ನೊಂದಣಿ ಕಡ್ಡಾಯ: ಜಿಲ್ಲಾಧಿಕಾರಿ

ಉಡುಪಿ, ಜುಲೈ 17: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ […]
ಗೋ ಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಜುಲೈ 17: ಕನಿಷ್ಠ 50 ಸ್ವದೇಶಿ ಜಾನುವಾರುಗಳನ್ನು ಕಳೆದ 3 ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್ ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ 2019-20 ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ 22 ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: […]
ಗರ್ಡಾಡಿ: ಕಾಡುಪ್ರಾಣಿ ದಾಳಿಗೆ ಸಾಕುನಾಯಿ ಬಲಿ

ಬೆಳ್ತಂಗಡಿ, ಜು. 16: ಕಾಡುಪ್ರಾಣಿಯೊಂದು ಸಾಕು ನಾಯಿಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಗರ್ಡಾಡಿ ಗ್ರಾಮದ ಡೆಂಜೋಳಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಡೆಂಜೋಳಿಯ ರಘುರಾಮ ಶೆಟ್ಟಿ ಎಂಬವರ ಮನೆಯ ಸಾಕು ನಾಯಿ ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿತ್ತು. ಮಂಗಳವಾರ ಬೆಳಿಗ್ಗೆ ಮನೆಯವರು ಹುಡುಕಾಡಿದಾಗ ಗದ್ದೆಯ ಸಮೀಪ ಮೃತದೇಹ ಪತ್ತೆಯಾಗಿದೆ. ನಾಯಿಯ ಮುಖದ ಭಾಗಕ್ಕೆ ಸಂಪೂರ್ಣ ಗಾಯವಾಗಿದ್ದು, ಕಣ್ಣುಗಳು, ಮೂತಿ ಚಚ್ಚಿ ಹುಡಿಯಾದಂತಿತ್ತು. ಚಿರತೆ ಅಥವಾ ಕಾಡು ಹಂದಿ ದಾಳಿ ನಡೆಸಿ ಕೊಂದಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. […]
ಕಾರ್ಕಳ: ಮಾಳದಲ್ಲಿ ಅಳಿವಿನಂಚಿನಲ್ಲಿರುವ ಮಲಬಾರ್ ಮರ ಕಪ್ಪೆ ಪತ್ತೆ

ಚಿತ್ರ: ಮನು ಬಿ.ನಕ್ಕತ್ತಾಯ ಉಡುಪಿ: ಅಳಿವಿನಂಚಿನಲ್ಲಿರುವ ‘ಮಲಬಾರ್ ಟ್ರೀ ಟೋಡ್’ (ಮಲಬಾರ್ ಮರ ಕಪ್ಪೆ) ಪ್ರಬೇಧವು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಣ್ಣ ಪಾಪು ಮನೆ ಪರಿಸರದಲ್ಲಿ ಪತ್ತೆಯಾಗಿದ್ದು, ಈ ಮೂಲಕ ಮಾಳ ಅರಣ್ಯ ಪ್ರದೇಶವು ಕಪ್ಪೆಗಳಿಗೆ ಸೂಕ್ತವಾದ ಆವಾಸ ಸ್ಥಾನ ಎಂಬುದಾಗಿ ತಿಳಿದುಬಂದಿದೆ. 2003-04ರ ವರೆಗೆ ಅತ್ಯಂತ ಅಪರೂಪ ಎನಿಸಿದ್ದ ‘ಮಲಬಾರ್ ಟ್ರೀ ಟೋಡ್’ ಕಪ್ಪೆ ಪ್ರಬೇಧವು ಗೋವಾ, ಕೇರಳ, ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟಗಳ ಎರಡು ಮೂರು ಕಡೆಗಳಲ್ಲಿ ಮಾತ್ರ ಕಂಡು ಬಂದಿತ್ತು. ಕಪ್ಪೆ […]