ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್

ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಗಳಿಸಿದ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ […]