ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುವು ನೀಡಿದ ಜಿಲ್ಲಾಡಳಿತ

ಉಡುಪಿ: ರಾ.ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಶೋಭಾ ಕರಂದ್ಲಾಜೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಹಾಗೂ ರಾ. ಹೆದ್ದಾರಿ 169 ಎ ರ ರಸ್ತೆ ಕಾಮಗಾರಿಗಳು ಪ್ರಗತಿಯಲಿದ್ದು, ಮುಂಗಾರು ಮಳೆಯ ಹಿನ್ನೆಲೆ, ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಮಳೆ ಕಡಿಮೆ ಇರುವ ಹಿನ್ನೆಲೆ, ಕಾಮಗಾರಿಗಳನ್ನು ಪುನರಾರಂಭಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು […]