ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಶೀಘ್ರ ಚರ್ಚೆ : ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ […]
ಭತ್ತದ ಮೋಟೆ ಹೊತ್ತಿದ್ದ ಲಾರಿ ಕಾರಿನ ಮೇಲೆ ಪಲ್ಟಿ: ಪ್ರಯಾಣಿಕರು ಪವಾಡ ಸದೃಶ ಪಾರು

ಪರ್ಕಳ: ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಕೆಳಪರ್ಕಳದಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಪ್ರವಾಸಿ ಕಾರುಗಳ ಮೇಲೆ ಪಲ್ಟಿಯಾಗಿದೆ. ಇದರಲ್ಲಿ ಒಂದು ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಪ್ರಯಾಣಿಕರು ಕೆಲಹೊತ್ತು ಪರದಾಡಿದರು. ಕಾರಿನಲ್ಲಿದ್ದವರು ಪವಾಡಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ಮಣಿಪಾಲ- ಪರ್ಕಳ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವ ವಾಹನ ಚಾಲಕರು ಉಡುಪಿಯಿಂದ ಕಾರ್ಕಳಕ್ಕೆ ತೆರಳುವಾಗ ಗೊಂದಲಕ್ಕೆ […]
ಹೆಜಮಾಡಿ ಟೋಲ್ ನಲ್ಲಿ ದುಬಾರಿ ಶುಲ್ಕ ಅವೈಜ್ಞಾನಿಕ: ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಡಿ. 01ರಂದು ಶಾಸಕ ರಘುಪತಿ ಭಟ್ ಅವರು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಮನವಿ ಸ್ವೀಕರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ […]
ಸುರತ್ಕಲ್ ಟೋಲ್ ಗೇಟ್ ಶೀಘ್ರ ತೆರವು: ಮುತ್ತಿಗೆ ಕೈ ಬಿಡಲು ಮನವಿ

ಸುರತ್ಕಲ್: ಇಲ್ಲಿನ ಅಕ್ರಮ ಟೋಲ್ ಗೇಟ್ ಅನ್ನು ಇನ್ನೂ ತೆರವುಗೊಳಿಸದಿರುವುದನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳು ಅಕ್ಟೋಬರ್ 18ರಂದು ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಜಿಲ್ಲಾಡಳಿತದ ಪರವಾಗಿ ಪಣಂಬೂರು ಪೊಲೀಸ್ ಉಪ ಆಯುಕ್ತರ ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಮದನ್ ಮೋಹನ್, ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸಗಳು ನಡೆಯುತ್ತಿದ್ದು, ಶೀಘ್ರ […]
ಪರ್ಕಳ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸಲು ಹದಿನೈದು ದಿನ ಗಡುವು: ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಪ್ರತಿಭಟನೆ

ಪರ್ಕಳ: ಭಾನುವಾರದಂದು ಪರ್ಕಳದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಮನೋವೈದ್ಯ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಧರಣಿ ನಡೆಯಿತು. ಪರ್ಕಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮಾನ ಮನಸ್ಕರು ಮತ್ತು ಪರ್ಕಳ ನಿವಾಸಿಗಳು ಪಾಲ್ಗೊಂಡರು. ಧರಣಿಯ ನೇತೃತ್ವ ವಹಿಸಿದ ಡಾ.ಪಿ.ವಿ.ಭಂಡಾರಿ ಮಾತನಾಡಿ ಶಾಸಕರು, ಸಂಸದರು ಮತ್ತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇತ್ತೀಚೆಗೆ ಅಧ್ಯಯನಕ್ಕಾಗಿ ಶಾಸಕರೆಲ್ಲ ಲೇಹ್ ಲಡಾಕ್ ಗೆ ಹೋಗಿದ್ದಾರೆ. ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ನಮ್ಮ ಪರ್ಕಳ ರಸ್ತೆಗೆ ಬಂದರೆ ಸಾಕು, ನಿಮಗೆ ಇಲ್ಲಿಯೇ ಲೇಹ್ ಲಡಾಕ್ ನ […]