ಆಗುಂಬೆ ಘಾಟಿಯಲ್ಲಿ ಭೂಕುಸಿತ: ಸೆಪ್ಟಂಬರ್ 30 ರ ವರೆಗೆ ಭಾರಿ ವಾಹನ ಸಂಚಾರ ನಿಷೇಧ
ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರ ವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.