ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ: ಇಲ್ಲಿನ ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕುಂಠಿತವಾಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಹೆದ್ದಾರಿಯಲ್ಲಿ ಸುಗಮ ಸಂಚಾರ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಸ್ಥಳ ಪರಿಶೀಲನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನರ್ಪಾಡಿ: ಆಗಸ್ಟ್ 31ರಿಂದ ಸೆಪ್ಟೆಂಬರ್ 4 ರವರೆಗೆ ಹದಿನೇಳನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಕಿನ್ನಿಮೂಲ್ಕಿ: ಕನ್ನರ್ಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಹದಿನೇಳನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಆಗಸ್ಟ್ 31 ಬುಧವಾರದಿಂದ ಸೆಪ್ಟೆಂಬರ್ 4 ರವಿವಾರದವರೆಗೆ ರಾ.ಹೆ 66 ಸ್ವಾಗತಗೋಪುರದ ಬಳಿಯ ಗಣಪತಿ ಮೈದಾನದ ಬಳಿ ಜರುಗಲಿರುವುದು.