ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಎನ್.ಎಚ್.ಎ.ಐ ಒಪ್ಪಿಗೆ: 2 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್‌ ಸಿದ್ದತೆ

ಉಡುಪಿ: ಮಲ್ಪೆ – ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169ಎ) ಚತುಷ್ಪಥ ಯೋಜನೆ ಪ್ರಗತಿಯಲ್ಲಿದ್ದು, ಆಗುಂಬೆ ಘಾಟಿಯಲ್ಲಿ(Agumbe Ghat) ಪದೇ ಪದೇ ಗುಡ್ಡ ಕುಸಿತ, ತಡೆಗೋಡೆ ಬಿರುಕು ಸಮಸ್ಯೆ ಕಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಮತ್ತೆ ಸದ್ದು ಮಾಡತೊಡಗಿದೆ. ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಇತ್ತೀಚೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕರಾವಳಿ ಮಲೆನಾಡು ಬೆಸೆಯುವ ಸುರಂಗ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯೋಜನೆಯ ಸಾಧಕ – […]

ಇಂಡಿಯಾ ಗೇಟ್ ಅನ್ನು ಗೇಟ್ ವೇ ಆಫ್ ಇಂಡಿಯಾಗೆ ಬೆಸೆಯಲಿರುವ 1,386 ಕಿಮೀ ಉದ್ದದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ

ನವದೆಹಲಿ: ಇಂಡಿಯಾ ಗೇಟ್ ಅನ್ನು ಗೇಟ್ ವೇ ಆಫ್ ಇಂಡಿಯಾಗೆ ಬೆಸೆಯುವ 1,386 ಕಿಮೀ ಉದ್ದದ ಭಾರತದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಭಾರತದ ರಾಷ್ಟ್ರೀಯ ರಾಜಧಾನಿ ದೆಹಲಿಯನ್ನು ವಾಣಿಜ್ಯ ರಾಜಧಾನಿ ಮುಂಬೈಗೆ ಸಂಪರ್ಕಿಸಲಿದೆ. ಈ ಎಕ್ಸ್‌ಪ್ರೆಸ್‌ವೇ ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ಸಮಯವನ್ನು 12 ಗಂಟೆಗಳಿಗೆ ಕಡಿತಗೊಳಿಸುತ್ತದೆ. ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕಾಗಿ ಸುಮಾರು 12 ಲಕ್ಷ ಟನ್ ಉಕ್ಕು ಬಳಸಲಾಗುತ್ತದೆ ಮತ್ತು ಈ ಯೋಜನೆಯು 10 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಿದೆ. ನಿರ್ಮಾಣಕ್ಕೆ […]

ಇಂದ್ರಾಳಿ ರೈಲ್ವೆ ಬ್ರಿಡ್ಜ್ ರಸ್ತೆ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಜಿಲ್ಲಾಧಿಕಾರಿಗೆ ಸಭೆಯಲ್ಲಿ ರಾ.ಹೆ ಅಧಿಕಾರಿಗಳಿಂದ ಮಾಹಿತಿ

ಉಡುಪಿ: ಮಂಗಳವಾರದಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿ ಸಭೆಯು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಮತ್ತು ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ ನಿಂದ ತಡೆ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ […]

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಕ್ತಾಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಗುರುವಾರ ನಗರದ ಸಂತೆಕಟ್ಟೆ ಜಂಕ್ಷನ್ ನಲ್ಲಿ ಓವರ್ ಪಾಸ್ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ […]

ಸಂತೆಕಟ್ಟೆ ಮೇಲ್ಸೇತುವೆ ಕಾಮಗಾರಿಗೆ ಸಿದ್ದತೆ: ವರ್ಷದೊಳಗೆ ಪೂರ್ಣಗೊಳ್ಳುವ ಸಾಧ್ಯತೆ

ಉಡುಪಿ: ಇಲ್ಲಿನ ರಾ.ಹೆ 66 ರಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಂತೆಕಟ್ಟೆ ಮತ್ತು ಅಂಬಲಪಾಡಿ ಮೇಲ್ಸೇತುವೆ ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುಮೋದನೆ ನೀಡಿದ್ದು, ಇದೀಗ ಈ ಭಾಗದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಕಾಮಗಾರಿಯ ವೆಚ್ಚ 27.4 ಕೋ ರೂ ಆಗಲಿದ್ದು ಅದಾಗಲೇ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ. ಸೋಮವಾರದಿಂದಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ಸರ್ವಿಸ್ ರತೆಗಳ ಮೂಲಕ ವಾಹನ […]