ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್‌ಐಎ ಗೆ ಹಸ್ತಾಂತರ

ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಬ್ಲಾಸ್ಟ್‌ ಪ್ರಕರಣ (Bomb Blast Case) ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ. ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯ ಬ್ರೂಕ್‌ಫೀಲ್ಡ್ ಔಟ್‌ಲೆಟ್‌ನಲ್ಲಿ ಶುಕ್ರವಾರ (ಮಾರ್ಚ್ 1) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು […]

ಆರ್‌ಎಸ್‌ಎಸ್ ನಾಯಕ ರುದ್ರೇಶ್ ಕೊಲೆಗಾರ ಮೊಹಮ್ಮದ್ ಘೌಸ್ ನಯಾಜಿ ಬಂಧನ: ದ. ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರ

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪದಾಧಿಕಾರಿಯನ್ನು ಕೊಂದ ಆರೋಪಿ ಮೊಹಮ್ಮದ್ ಘೌಸ್ ನಯಾಜಿಯನ್ನು ಬಂಧಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಕ್ರಿಯ ಸದಸ್ಯ ನಯಾಜಿ 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಆರ್ ರನ್ನು ಸಂಚು ರೂಪಿಸಿ ಹತ್ಯೆಗೈದಿದ್ದ. 35 ವರ್ಷದ ರುದ್ರೇಶ್ ಆರ್‌ಎಸ್‌ಎಸ್‌ನ ಶಿವಾಜಿನಗರ ಶಾಖೆಯ ಮಂಡಲ ಅಧ್ಯಕ್ಷ ಮತ್ತು ಬಿಜೆಪಿ ಶಿವಾಜಿನಗರ ಕಾರ್ಯದರ್ಶಿಯಾಗಿದ್ದರು. ಘಟನೆಯ ನಂತರ, […]

ಹೊಸ ಭಯೋತ್ಪಾದಕ ಗುಂಪುಗಳು ರಚನೆಯಾಗದಂತಹ ಕಾರ್ಯವಿಧಾನ ಅನುಸರಿಸಿ: ಏಜೆನ್ಸಿಗಳಿಗೆ ಅಮಿತ್ ಶಾ ಕರೆ

ನವದೆಹಲಿ: ಹೊಸ ಭಯೋತ್ಪಾದಕ ಗುಂಪುಗಳು ರಚನೆಯಾಗದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಏಜೆನ್ಸಿಗಳು ಕಠಿಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಗುರುವಾರ ನವದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆಯೋಜಿಸಿದ್ದ ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ದೃಢವಾಗಿ ನಿಗ್ರಹಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ಯಶಸ್ವಿಯಾಗಿದೆ. ಎನ್‌ಐಎ ವ್ಯಾಪ್ತಿಯಲ್ಲಿ ಮಾದರಿ ಭಯೋತ್ಪಾದನೆ ನಿಗ್ರಹ ರಚನೆಯನ್ನು […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕಳೆದ ವರ್ಷ ಭಾರತೀಯ ಜನತಾ ಪಕ್ಷದ(BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಚ್‌ಬಿ ಪ್ರಭಾಕರ ಶಾಸ್ತ್ರಿ ಮತ್ತು ಅನಿಲ್ ಬಿ ಕತ್ತಿ ಅವರ ಪೀಠವು ಆರೋಪಿಗಳು ಅಪರಾಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ತೋರಿಸಲು ಸಾಕಷ್ಟು ದೋಷಾರೋಪಣೆಯ ಸಾಕ್ಷ್ಯವನ್ನು ಕಂಡುಹಿಡಿದಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸದಸ್ಯರಾಗಿರುವ ಮೂವರು ಆರೋಪಿಗಳಾದ ಇಸ್ಮಾಯಿಲ್ ಶಫಿ ಕೆ, ಕೆ ಮಹಮ್ಮದ್ ಇಕ್ಬಾಲ್ ಮತ್ತು ಶಹೀದ್ ಎಂ […]

NIAಯ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಬಂಧಿಸಿದ ದೆಹಲಿ ಪೊಲೀಸ್

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ಭಯೋತ್ಪಾದನಾ ನಿಗ್ರಹ ದಳದ ದೊಡ್ಡಕಾರ್ಯಾಚರಣೆಯ ವೇಳೆ ದೆಹಲಿಯಲ್ಲಿ ಬಂಧಿಸಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯ ಅಡಗುತಾಣದಿಂದ ಬಂಧಿಸಿದೆ. ದೆಹಲಿ ಪೊಲೀಸರ ವಿಶೇಷ ಸೆಲ್ NIA ಯೊಂದಿಗೆ ಸಹಕರಿಸಿದೆ. ಭಯೋತ್ಪಾದಕ ಸಂಘಟನೆಯ ಸ್ಲೀಪರ್ ಸೆಲ್‌ಗಳೆಂದು ಶಂಕಿಸಲಾದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ […]