ಕೇರಳದಲ್ಲಿ ನಿಫಾ ವೈರಸ್ ಪತ್ತೆ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಇದೀಗ ನಿಫಾ ವೈರಸ್ ಕೂಡ ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡುವ ಪ್ರಕ್ರಿಯೆ ಹಾಗೂ ಕೊರೊನಾ ಪರೀಕ್ಷೆಯನ್ನು ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು. […]